ಯಾದಗಿರಿ ತಾಲ್ಲೂಕಿನ ಹತ್ತಿಕುಣಿ ಗ್ರಾಮದಲ್ಲಿರುವ ಪ್ರೌಢ ಶಾಲೆಯ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ಸ್ವಚ್ಚತಾ ಶ್ರಮದಾನ ನಡೆಸಿದರು.

ಶಾಲೆಯ ಸುತ್ತಲೂ ಬೆಳೆದಿದ್ದ ಹುಲ್ಲು, ಕಸಕಡ್ಡಿಗಳನ್ನು ತೆಗೆದು ಸ್ವಚ್ಚತೆ ಮಾಡಲಾಯಿತು.
ಶೌರ್ಯ ಘಟಕದ ಸದಸ್ಯರಾದ ರಾಜಶ್ರೀ, ಕಾಶಮ್ಮ, ಮಹಾದೇವಿ, ಕವಿತಾ, ತಿಪ್ಪಣ್ಣ, ಶರಣಪ್ಪ, ಮಲ್ಲಯ್ಯ ಶ್ರಮದಾನದಲ್ಲಿ ಪಾಲ್ಗೊಂಡರು.

ಸ್ವಯಂಸೇವಕರ ಈ ಸೇವೆಗೆ ಶಾಲಾಭಿವೃದ್ದಿ ಸಮಿತಿಯ ಸದಸ್ಯರು ಮತ್ತು ಗ್ರಾಮಸ್ಥರು ಅಭಿನಂದನೆ ಸಲ್ಲಿಸಿರುತ್ತಾರೆ.