ಅಕ್ಟೋಬರ್ 2 ರಂದು ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಜನ್ಮದಿನವನ್ನು ‘ಗಾಂಧಿ ಜಯಂತಿ’ಯಾಗಿ ಅತ್ಯಂತ ಗೌರವದಿಂದ ಆಚರಿಸಲಾಗುತ್ತದೆ. ಈ ಶುಭ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸುಬ್ರಹ್ಮಣ್ಯದ ಸ್ವಯಂಸೇವಕರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕಲ್ಮಕಾರು ಇಲ್ಲಿ ಸ್ವಚ್ಚತಾ ಶ್ರಮದಾನವನ್ನು ನಡೆಸಿ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದರು.

ಘಟಕ ಪ್ರತಿನಿಧಿ ಸತೀಶ್ ಟಿ ಎನ್, ಸ್ವಯಂಸೇವಕರಾದ ಲೀಲಾವತಿ , ದೇವಕುಮಾರ, ಅನಿತಾ ಮತ್ತು ಸುನಂದ ಉಪಸ್ಥಿತರಿದ್ದರು.