
ಧಾರವಾಡ: (11.07.2020) ಜಿಲ್ಲೆಯ ನವಲಗುಂದ ಹಾಗೂ ಧಾರವಾಡದಲ್ಲಿ ವಿಪತ್ತು ನಿರ್ವಹಣಾ ಘಟಕ ರಚನೆಯ ಪ್ರಕ್ರಿಯೆ ಆರಂಭವಾಗಿದ್ದು, ವಿಪತ್ತು ನಿರ್ವಹಣೆ ಕಾರ್ಯಕ್ರಮವನ್ನು ಪರಿಚಯಿಸುವ ಹಾಗೂ ವಿಪತ್ತು ನಿರ್ವಹಣಾ ಸ್ವಯಂಸೇವಕರಿಗೆ ಎನ್.ಡಿ.ಆರ್.ಎಫ್ ಪಡೆಯ ಮೂಲಕ ತರಬೇತಿ ಕಾರ್ಯಕ್ರಮ ಆಯೋಜಿಸಲು ಸಹಕಾರ ನೀಡುವ ಕುರಿತಾಗಿ ಇಂದು ಧಾರವಾಡ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಯವರಾದ ಶ್ರೀ ನಿತೀಶ್ ಪಾಟೀಲ್ ಅವರನ್ನು ಜನಜಾಗೃತಿ ಪ್ರಾದೇಶಿಕ ನಿರ್ದೇಶನಾಲಯದ ಮಾನ್ಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ಭೇಟಿ ನೀಡಿ ಚರ್ಚಿಸಿದರು.

ತಾಲೂಕು ಮಟ್ಟದಲ್ಲಿ ವಿಪತ್ತು ನಿರ್ವಹಣಾ ಘಟಕ ಆರಂಭಿಸುವುದು, ಸ್ವಯಂಸೇವಕರ ಆಯ್ಕೆ, ಸ್ವಯಂಸೇವಕರ ತರಬೇತಿಗಳು, ವಿಪತ್ತು ನಿರ್ವಹಣಾ ಘಟಕದ ಕಾರ್ಯಗಳ ಕುರಿತಂತೆ ಜಿಲ್ಲಾಧಿಕಾರಿಯವರಿಗೆ ಮಾಹಿತಿ ನೀಡಿದರು.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಡೆಯುವ ವಿಪತ್ತು ನಿರ್ವಹಣೆ ಕಾರ್ಯಕ್ರಮಕ್ಕೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಜಿಲ್ಲಾಧಿಕಾರಿಯವರು ಭರವಸೆ ನೀಡಿದರು. ಅಲ್ಲದೇ ಎನ್.ಡಿ.ಆರ್.ಎಫ್ ಪಡೆಯನ್ನು ತರಬೇತಿ ನೀಡಲು ನಿಯೋಜಿಸುವುದಾಗಿ ಮಾನ್ಯ ಜಿಲ್ಲಾಧಿಕಾರಿಯವರು ತಿಳಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಬಿ.ಸಿ.ಸತೀಶ್, ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೆಶಕರಾದ ಮಾನ್ಯ ಶ್ರೀ ಸುರೇಶ್ ಎಂ ,ಯೋಜನಾಧಿಕಾರಿ ಶ್ರೀ ಉಲ್ಲಾಸ್ ಮೇಸ್ತ ಹಾಜರಿದ್ದರು.