ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಕಡಬ ಮತ್ತು ಸುಳ್ಯ ತಾಲ್ಲೂಕಿನ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂಸೇವಕರಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್.ಡಿ.ಆರ್.ಎಫ್) ಯೋಧರಿಂದ ವಿಪತ್ತಿನ ಸಮಯದಲ್ಲಿ ತುರ್ತು ಸ್ಪಂದನೆಯ ಬಗ್ಗೆ ತರಬೇತಿ ನಡೆಯಿತು.

ದಿನಾಂಕ: 07.07.2026 ರಂದು ನಡೆದ ತರಬೇತಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ್ ರವರು ಉದ್ಘಾಟನೆ ನಡೆಸಿದರು. ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ತಾಲ್ಲೂಕು ಜನಜಾಗೃತಿ ವೇದಿಕೆಯ ಅದ್ಯಕ್ಷ ಸತೀಶ್ ನಾಯ್ಕ ರವರು ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಭಾಗವಹಿಸಿದ 280 ಮಂದಿ ಸ್ವಯಂಸೇವಕರಿಗೆ ಎನ್.ಡಿ.ಆರ್.ಎಫ್ ಇನ್ಸ್ಪೆಕ್ಟರ್ ಶಾಂತಿಲಾಲ್ ಜಟಿಯ ರವರ ನೇತ್ರತ್ವದಲ್ಲಿ ತರಬೇತಿ ನಡೆಯಿತು. ಸಹಾಯಕ ಇನ್ಸ್ಪೆಕ್ಟರ್ ಸುಭಾಷ್ ಸಿಂಧೆ ಮತ್ತು ಎನ್.ಡಿ.ಆರ್.ಎಫ್ ಯೋಧರು ತರಬೇತಿ ನೀಡಿದರು.

ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮದ ಯೋಜನಾಧಿಕಾರಿ ಜೈವಂತ ಪಟಗಾರ್ ತರಬೇತಿಯ ನಿರ್ವಹಣೆ ಮಾಡಿದರು. ಪುತ್ತೂರು ತಾಲ್ಲೂಕು ಯೋಜನಾಧಿಕಾರಿ ಸಶೀಧರ್, ಸುಳ್ಯ ತಾಲ್ಲೂಕು ಯೋಜನಾಧಿಕಾರಿ ಮಾಧವ ಗೌಡ, ಕಡಬ ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಮೇಲ್ವಿಚಾರಕ ನಿತೇಶ್ ಮತ್ತಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಪುತ್ತೂರು, ಸುಳ್ಯ ಮತ್ತು ಕಡಬ ತಾಲ್ಲೂಕಿನ ವಿಪತ್ತು ನಿರ್ವಹಣಾ ಸಮಿತಿಗೆ ನೂತನ ಮಾಸ್ಟರ್ ಮತ್ತು ಕ್ಯಾಪ್ಟನ್ ಆಯ್ಕೆ ಮಾಡಲಾಯಿತು.
