ಅಕ್ಟೋಬರ್ 2 ರಂದು ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಜನ್ಮದಿನವನ್ನು ‘ಗಾಂಧಿ ಜಯಂತಿ’ಯಾಗಿ ಅತ್ಯಂತ ಗೌರವದಿಂದ ಆಚರಿಸಲಾಗುತ್ತದೆ. ಈ ಶುಭ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಅಜೆಕಾರು ಸ್ವಯಂಸೇವಕರು ಮರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಶ್ರಮದಾನವನ್ನು ನಡೆಸಿ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದರು.

ಘಟಕದ ಸದಸ್ಯರಾದ ವಿಜಯ ಕಾಮತ್, ಪ್ರವೀಣ್, ರಾಜೇಶ್, ಕೃಷ್ಣ, ದೇವೇಂದ್ರ, ಸುಮಿತ್ರ, ಮಲ್ಲಿಕ, ಹಾಗೂ ಮಮತಾ ಭಾಗವಹಿಸಿದರು.
ಗ್ರಾಮ ಪಂಚಾಯತಿಯಲ್ಲಿ ನಡೆದ ಗಾಂಧಿಜಯಂತಿ ಕಾರ್ಯಕ್ರಮದಲ್ಲಿ ಎಲ್ಲಾ ಸ್ವಯಂಸೇವಕರು ಭಾಗವಹಿಸಿದರು.