ಬಂಟ್ವಾಳ ತಾಲ್ಲೂಕಿನ ಕಾಡಬೆಟ್ಟು ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಕ್ತದಾನ ಮತ್ತು ಆರೋಗ್ಯ ತಪಾಸಣೆ ಶಿಬಿರ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ರಕ್ತದಾನ ಮಾಡಿದರು.
ವಿಶ್ವ ಹಿಂದೂ ಪರಿಷತ್, ಬಜರಂಗದಳ, ಶ್ರೀ ದುರ್ಗಾ ಶಾಖೆ ಕಾಡಬೆಟ್ಟು, ಬಂಟ್ವಾಳ ಪ್ರಖಂಡ, ಶತಮಾನೋತ್ಸವ ಸಮಿತಿ ದಕ್ಷಿಣ ಕನ್ನಡ, ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಾಡಬೆಟ್ಟು ಇವರ ಸಹಯೋಗ ದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಸಹಕಾರ ದೊಂದಿಗೆ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ನಡೆದಿದ್ದು ಕಾಡಬೆಟ್ಟು ಘಟಕದ ಘಟಕ ಪ್ರತಿನಿಧಿ ಪ್ರವೀಣ್, ಸದಸ್ಯರುಗಳಾದ ಸಂಪತ್ ಶೆಟ್ಟಿ, ಮಹಾಬಲ ರೈ, ಜನಾರ್ದನ, ರೋಹಿತ್ ಇವರು ರಕ್ತದಾನ ಮಾಡಿರುತ್ತಾರೆ.