ಕುಂದಾಪುರ ತಾಲ್ಲೂಕಿನ ಬಳಕೂರಿನ ಮೂಡ್ಲಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮತ್ತು ಶಾಲಾಭಿವೃದ್ದಿ ಸಮಿತಿಯ ಸಹಭಾಗಿತ್ವದಲ್ಲಿ ನಡೆದ ಈ ಕಾಯಱಕ್ರಮದಲ್ಲಿ ಮಕ್ಕಳಿಗೆ ಪರಿಸರ ಸಂರ್ವಕ್ಷಣೆಯ ಬಗ್ಗೆ ತಿಳುವಳಿಕೆ ಮೂಡಿಸುವ ಕೆಲಸ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಶಾಲೆಯ ಆವರಣದಲ್ಲಿ ವಿಧವಿಧದ ಔಷಧೀಯ ಗಿಡಗಳು ಮತ್ತು ಹೂವಿನ ಗಿಡಗಳನ್ನು ನಾಟಿ ಮಾಡಲಾಯಿತು.
ತಾಲೂಕಿನ ಕೃಷಿ ಮೇಲ್ವಿಚಾರಕರಾದ ರಾಘವೇಂದ್ರ ಇವರು ಪರಿಸರ ರಕ್ಷಣೆಯ ಅಗತ್ಯತೆಯ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು.

ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಕ್ಯಾಪ್ಟನ್ ಸುಧಾಕರ್, ಸ್ವಯಂಸೇವಕರಾದ ಅಶೋಕ್ ಕೆರೆಕಟ್ಟೆ, ಸೂರ್ಯಕಾಂತ್, ಬಾಲಕೃಷ್ಣ ಸೆರೆಗಾರ್ ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಮಕ್ಕಳಿಗೆ ಪರಿಸರದ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿ, ಬಹುಮಾನ ಮತ್ತು ಸಿಹಿತಿಂಡಿಯನ್ನು ವಿತರಿಸಲಾಯಿತು.