ರಾಜಧಾನಿ ರಾಜ ಯೂತ್ ಕ್ಲಬ್ (ರಿ.) ಬಾರಕೂರು, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಾರಕೂರು, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ, ರೋಟರಿ ಕ್ಲಬ್ ಬಾರಕೂರು,, ಬ್ರಹ್ಮಶ್ರೀ ನಾರಾಯಣಗುರು-ಕೋಟಿ ಚೆನ್ನಯ್ಯ ಮುಂತಾದ ಸಂಘಟನೆಗಳ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ಬ್ರಹ್ಮಾವರ ತಾಲ್ಲೂಕಿನ ಬಾರ್ಕೂರಿನಲ್ಲಿ ನಡೆಯಿತು.

ಈ ಶಿಬಿರದಲ್ಲಿ ಭಾಗವಹಿಸಿದ ಬ್ರಹ್ಮಾವರ ವಿಪತ್ತು ನಿರ್ವಹಣಾ ಘಟಕಗಳ ಸ್ವಯಂಸೇವಕರು ರಕ್ತದಾನ ಮಾಡಿದರು. ತಾಲ್ಲೂಕು ಯೋಜನಾಧಿಕಾರಿ ರಮೇಶ್ ರವರು ಸ್ವಯಂಸೇವಕರಿಗೆ ಮಾರ್ಗದರ್ಶನ ನೀಡಿದರು.