ಅಂಕೋಲಾ: ಅಂತರರಾಜ್ಯ ಮಟ್ಟದ ಅಣಕು ಕಾರ್ಯಾಚರಣೆ ಮತ್ತು ತರಬೇತಿ,

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (NDMA), ಗೃಹ ವ್ಯವಹಾರಗಳ ಸಚಿವಾಲಯ, ಭಾರತ ಸರ್ಕಾರದ ನಿರ್ದೇಶನದಂತೆ ಗೋವಾ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚಂಡಮಾರುತ ಹಾಗೂ ಅದರಿಂದ ಉಂಟಾಗಬಹುದಾದ ವಿಪತ್ತುಗಳನ್ನು ಎದುರಿಸುವ ಕುರಿತು ಅಂತರರಾಜ್ಯ ಮಟ್ಟದ ಅಣಕು ಕಾರ್ಯಾಚರಣೆ ಮತ್ತು ತರಬೇತಿ ಕಾರ್ಯಕ್ರಮವನ್ನು ಅಂಕೋಲಾ ಅಗ್ನಿಶಾಮಕ ಠಾಣೆಯಲ್ಲಿ ಆಯೋಜಿಸಲಾಗಿತ್ತು. ಶೌರ್ಯ ವಿಪತ್ತು ನಿರ್ವಹಣಾ ಘಟಕಗಳ ಸ್ವಯಂಸೇವಕರು ಭಾಗವಹಿಸಿ ತರಬೇತಿ ಪಡೆದುಕೊಂಡರು.

ಚಂಡಮಾರುತದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು, ರಕ್ಷಣಾ ಕಾರ್ಯಾಚರಣೆ, ತುರ್ತು ಪರಿಸ್ಥಿತಿ ನಿರ್ವಹಣೆ, ಸಂತ್ರಸ್ತರ ರಕ್ಷಣೆ ಹಾಗೂ ವಿಪತ್ತು ಸಂದರ್ಭದಲ್ಲಿ ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವ ಕುರಿತು ತರಬೇತಿ ನೀಡಲಾಯಿತು.

ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತು ರಕ್ಷಣಾ ಕಾರ್ಯಾಚರಣೆಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ಅಗತ್ಯವಿರುವ ಪ್ರಾಯೋಗಿಕ ತರಬೇತಿ ಹಾಗೂ ಮಾರ್ಗದರ್ಶನವನ್ನು ಅಗ್ನಿಶಾಮಕ ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ಸ್ವಯಂಸೇವಕರು ಪಡೆದುಕೊಂಡರು. ತರಬೇತಿಯ ಮೂಲಕ ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ಸ್ವಯಂಸೇವಕರ ಸನ್ನದ್ಧತೆ, ಧೈರ್ಯ ಮತ್ತು ಕಾರ್ಯಕ್ಷಮತೆ ಹೆಚ್ಚಲು ಸಹಕಾರಿಯಾಗಿದೆ.

ಅಂಕೋಲಾ, ಕುಮಟಾ ಮತ್ತು ಕಾರವಾರ ವ್ಯಾಪ್ತಿಯ ಸ್ವಯಂಸೇವಕರು ತರಬೇತಿಯಲ್ಲಿ ಭಾಗವಹಿಸಿರುತ್ತಾರೆ.

Share Article
Previous ಸುಳ್ಯ: ಸರಕಾರಿ ಶಾಲೆಯಲ್ಲಿ ಗಾಂದಿ ಜಯಂತಿ ಪ್ರಯುಕ್ತ ಸ್ವಚ್ಚತಾ ಶ್ರಮದಾನ.

Leave Your Comment

Connect With Us

Janajagruthi Vedike Regional Office Belthangady, Surendra Mansion Building, First floor, Near Canara Bank, Main Road, Belthangady – 574214  

Follow Us On

[mc4wp_form id="228"]

Contact Us

SKDRDP® ©2023 | All Rights Reserved