
ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧೀಕಾರ, ಸ್ಕೌಟ್ಸ್ ಗೈಡ್ಸ್, ಕರ್ನಾಟಕ ಇದರ ಸಹಭಾಗಿತ್ವದಲ್ಲಿ ಯುವ ಆಪದ್ ಮಿತ್ರ ವಿಪತ್ತು ನಿರ್ವಹಣಾ ತರಬೇತಿ ಕಾರ್ಯಕ್ರಮವು ಡಾ. ವಿ. ಎಸ್. ಆಚಾರ್ಯ, ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಕೇಂದ್ರ, ಪ್ರಗತಿ ನಗರ, ಉಡುಪಿಯಲ್ಲಿ ನಡೆಯಿತು.
ಈ ತರಬೇತಿಗೆ ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮದ ಬಗ್ಗೆ ತರಬೇತಿ ನೀಡಲು ಆಹ್ವಾನಿಸಿದ್ದು ತರಬೇತಿಯಲ್ಲಿ ಭಾಗವಹಿಸಿದ್ದ ಸುಮಾರು 300 ವಿದ್ಯಾರ್ಥಿಗಳಿಗೆ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮದ ಬಗ್ಗೆ ತರಬೇತಿ ನೀಡಲಾಯಿತು.

ಶೌರ್ಯ ಘಟಕಕ್ಕೆ ಸ್ವಯಂಸೇವಕರಾಗಲು ಮಾನದಂಡಗಳು, ನಿಯಮಾವಳಿಗಳು, ಕಾರ್ಯಕ್ರಮದ ಉದ್ದೇಶ, ಇದುವರೆಗಿನ ಸಾಧನೆ ಇತ್ಯಾದಿಗಳ ಬಗ್ಗೆ ಮಾಹಿತಿ ನೀಡಲಾಯಿತು.
ಈ ಸಂದರ್ಭ ಯುನಿಸೆಫ್ ಸಂಸ್ಥೆಯ ರಾಜ್ಯದ ಮುಖ್ಯಸ್ಥರಾದ ಶ್ರೀ ಪ್ರಭಾತ್ ಉಪಸ್ಥರಿದ್ದು ವಿಪತ್ತು ನಿರ್ವಹಣೆಯ ಬಗ್ಗೆ ತರಬೇತಿ ನೀಡಿದರು. ನೀರು ಉಳಿಸಿ ಕಾರ್ಯಕ್ರಮದ ಯೋಜನಾಧಿಕಾರಿ ಶ್ರೀ ನಿಖಿಲೇಶ್, ವಿಪತ್ತು ನಿರ್ವಹಣಾ ಕಾರ್ಯಕ್ರಮದ ಯೋಜನಾಧಿಕಾರಿ ಶ್ರೀ ಜೈವಂತ ಪಟಗಾರ್ ಉಪಸ್ಥಿತರಿದ್ದರು.

ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಪದವಿ ಕಾಲೇಜಿನ 300 ವಿದ್ಯಾರ್ಥಿಗಳು ತರಬೇತಿಯಲ್ಲಿ ಭಾಗವಹಿಸಿ ಪ್ರಯೋಜನ ಪಡೆದರು.